ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ಸಮಾಜ ಸೇವೆ ಮಾಡುತ್ತಾ, ಭಾರತೀಯ ಜನಸಂಘದ ಸಹ ಸಂಸ್ಥಾಪಕರಾಗಿ, ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಕಟ್ಟಲು ಶ್ರಮಿಸಿದ ಮಹಾನ್ ಚೇತನ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಹೇಳಿದರು.
ಅವರು ಏಕಾತ್ಮ ಮಾನವ ದರ್ಶನ ಮತ್ತು ಅಂತ್ಯೋದಯದ ಪರಿಕಲ್ಪನೆಯನ್ನು ತೋರಿಸಿಕೊಟ್ಟ, ಜನಸಂಘದ ಸಹಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 105 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ವತಿಯಿಂದ ಕುಂಜತ್ತ್ ಬೈಲ್ ದಕ್ಷಿಣ ವಾರ್ಡ್ ನ ಬೂತ್ ನಂಬರ್ 79 ರ ಜಯಂತ್ ಶೆಟ್ಟಿ ದೋಟ ಅವರ ಮನೆಯಲ್ಲಿ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸ್ಥಳೀಯ ಕಾರ್ಪೊರೇಟರ್, ಉಪಮೇಯರ್ ಸುಮಂಗಲಾ ರಾವ್, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಶಾನ್ವಾಜ್ ಹುಸೇನ್, ಮಹಾಶಕ್ತಿ ಕೇಂದ್ರ ಕಾವೂರು1 ರ ಪ್ರಧಾನ ಕಾರ್ಯದರ್ಶಿ ಶಿತೇಶ್ ಕೊಂಡೆ, ಸುಜಿತ್ ಕುಲಾಲ್ ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಎಲ್ಲ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರ ಮಂಡಲ ಕಾರ್ಯ ನಿರ್ವಹಣಾ ಸಭೆ ಭಾನುವಾರ ಕಾವೂರು ಕಚೇರಿಯಲ್ಲಿ ನಡೆಯಿತು. ಶಾಸಕ ಡಾ.ವೈ ಭರತ್ ಶೆಟ್ಟಿಯವರು ಸಭೆಯನ್ನು ಉದ್ಘಾಟಿಸಿದರು. ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ ಅಧ್ಯಕ್ಷತೆ ವಹಿಸಿದ್ದರು. ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಬೆಳ್ತಂಗಡಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷೆ ಪ್ರಭಾಮಾಲಿನಿ, ಮಂಡಲದ ವಿವಿಧ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment