ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ

 


ಮೈಸೂರು:  ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಮೈಸೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.


ಮೈಸೂರು ರಿಂಗ್​ ರೋಡ್​​ ಬಳಿ ಸೆ.03 ರಂದು ಪೊಲೀಸರು, ಆರೋಪಿಯನ್ನು ಅರೆಸ್ಟ್‌​ ಮಾಡಿದ್ದಾರೆ


ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಮೈಸೂರಿನ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಡಡಿ ಹೌಸ್​​ನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಶುಕ್ರವಾರ ಸಂಜೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ನಡೆದಿದೆ. 


ಈ ಘಟನೆಯಲ್ಲಿ ಗಾಯೊಂಡಿರುವ ಯುವತಿ ನಗರದ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.


ಸ್ಟಡಿಹೌಸ್​ನಲ್ಲಿ ಆಂಧ್ರ ಮೂಲದ 7 ವಿದ್ಯಾರ್ಥಿನಿಯರಿದ್ದರು. ಘಟನೆ ವೇಳೆ ಉಳಿದ ವಿದ್ಯಾರ್ಥಿನಿಯರು ತರಗತಿಗೆ ತೆರಳಿದ್ದರು. ಇದನ್ನು ಗಮನಿಸಿಯೇ ಸ್ಟಡಿಹೌಸ್ ಒಳಗೆ ನುಗ್ಗಿದ್ದ ಆರೋಪಿ, ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆಗೈದು ಪರಾರಿಯಾಗಿದ್ದ.


ಈ ರೇಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಯ ವಿಚಾರಣೆ ನಡೆಸಿದ್ದಾರೆ.

0 Comments

Post a Comment

Post a Comment (0)

Previous Post Next Post