ಮೈಸೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಮೈಸೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮೈಸೂರು ರಿಂಗ್ ರೋಡ್ ಬಳಿ ಸೆ.03 ರಂದು ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ
ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರಿನ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಡಡಿ ಹೌಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಶುಕ್ರವಾರ ಸಂಜೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ನಡೆದಿದೆ.
ಈ ಘಟನೆಯಲ್ಲಿ ಗಾಯೊಂಡಿರುವ ಯುವತಿ ನಗರದ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಟಡಿಹೌಸ್ನಲ್ಲಿ ಆಂಧ್ರ ಮೂಲದ 7 ವಿದ್ಯಾರ್ಥಿನಿಯರಿದ್ದರು. ಘಟನೆ ವೇಳೆ ಉಳಿದ ವಿದ್ಯಾರ್ಥಿನಿಯರು ತರಗತಿಗೆ ತೆರಳಿದ್ದರು. ಇದನ್ನು ಗಮನಿಸಿಯೇ ಸ್ಟಡಿಹೌಸ್ ಒಳಗೆ ನುಗ್ಗಿದ್ದ ಆರೋಪಿ, ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆಗೈದು ಪರಾರಿಯಾಗಿದ್ದ.
ಈ ರೇಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಯ ವಿಚಾರಣೆ ನಡೆಸಿದ್ದಾರೆ.
إرسال تعليق