ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೂಡಬಿದರೆ ಗೃಹರಕ್ಷಕರಿಂದ ಸ್ವಚ್ಚತಾ ಅಭಿಯಾನ

ಮೂಡಬಿದರೆ ಗೃಹರಕ್ಷಕರಿಂದ ಸ್ವಚ್ಚತಾ ಅಭಿಯಾನ

 



ಮೂಡುಬಿದಿರೆ: ನಮ್ಮ ಸುತ್ತಲಿನ ಪರಿಸರವನ್ನು ನಾವು ಸ್ವಚ್ಚವಾಗಿಟ್ಟುಕೊಂಡರೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ಸ್ವಚ್ಚ ಸುಂದರ ಪರಿಸರದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಪರಿಸರವನ್ನು ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯವಸ್ತುಗಳಿಂದ ಮಲಿನಗೊಳಿಸಿದಲ್ಲಿ ಜೈವಿಕ ಸರಪಳಿ ಕಳಚಿಕೊಂಡು, ಪರಿಸರದಲ್ಲಿ ಅಸಮತೋಲನ ಉಂಟಾಗಿ ಹತ್ತು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಸಾಮಾಜಿಕ ಹೊಣೆಗಾರಿಕೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠರಾದ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.


ಭಾನುವಾರದಂದು (ಸೆ.26) ಮೂಡಬಿದರೆ ಘಟಕದ ವತಿಯಿಂದ ಮೂಡಬಿದರೆ ಸರಕಾರಿ ಹಿರಿಯ ಪ್ರಾಥಮಿಕ ಲೇಬರ್ ಶಾಲೆ ಇಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಮೂಡಬಿದರೆ ಘಟಕದ ಗೃಹರಕ್ಷಕರಿಗೆ ಸ್ಯಾನಿಟೈಸರ್ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಮೂಡಬಿದರೆ ಸರಕಾರಿ ಹಿರಿಯ ಪ್ರಾಥಮಿಕ ಲೇಬರ್ ಶಾಲೆಯ ಮುಖ್ಯ ಶಿಕ್ಷಕಿ ಪ್ರಪುಲ್ಲ, ಮೂಡಬಿದರೆ ಘಟಕದ ಪ್ರಭಾರ ಘಟಕಾಧಿಕಾರಿ ಪಾಂಡಿರಾಜ್ ಹಾಗೂ ಘಟಕದ ಗೃಹರಕ್ಷಕರು ಮತ್ತು ಮಂಗಳೂರು ಘಟಕದ ಗೃಹರಕ್ಷಕರಾದ ದಿವಾಕರ್, ದುಷ್ಯಂತ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗೃಹರಕ್ಷಕರ ಕುಂದು ಕೊರತೆಗಳ ಬಗ್ಗೆ ದೀರ್ಘವಾಗಿ ಚರ್ಚಿಸಲಾಯಿತು ಮತ್ತು ಮೂಡಬಿದರೆ ಗೃಹರಕ್ಷಕದಳಕ್ಕೆ ಹೊಸ ಕಛೇರಿ ನಿರ್ಮಿಸುವ ವಿಚಾರವಾಗಿ ಚರ್ಚಿಸಲಾಯಿತು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post