ಬೆಂಗಳೂರು: ಇಲ್ಲಿನ ಬಿಟಿಎಂ ಲೇಔಟ್ 25 ನೇ ಅಡ್ಡರಸ್ತೆಯ ಪಾರ್ಕ್ ಬಳಿ ಯುವತಿ ಮುಂದೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಿಶೋರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ತರಕಾರಿ ತರಲು ತೆರಳುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿ ನಿಂತಿದ್ದ ಕಾಮುಕ ಯುವತಿಯನ್ನು ಕರೆದಿದ್ದಾನೆ.
ಯುವತಿ ತಿರುಗಿ ನೋಡಿದಾಗ, ಆತ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Post a Comment