ದಾವಣಗೆರೆ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ದಾವಣಗೆರೆಯ ಭರತ್ ಕಾಲೋನಿಯ ಕೃಷ್ಣಾ ನಾಯ್ಕ್, ಸುಮಾ, ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೃಷ್ಣಾ ನಾಯ್ಕ್ ಪತ್ನಿ ಮತ್ತು ಮಗನಿಗೆ ವಿಷ ಕುಡಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಮಾಹಿತಿ ತಿಳಿದು ಸ್ಥಳಕ್ಕೆ ಅಗಮಿಸಿದ ಆರ್ ಎಂಸಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Post a Comment