ಬೆಂಗಳೂರು: ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ರಾಜ್ಯದ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.
ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ತಯಾರಾಗಿದೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ.
ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ಅಧಿವೇಶನದಲ್ಲಿ ಚರ್ಚಿಸುವ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.
إرسال تعليق