ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜೆಸಿಬಿ ಡೋಸರ್ ಹೈಡ್ರಾಲಿಕ್ ಒಳಗೆ ಸಿಲುಕಿ ಇಬ್ಬರು ಕಾರ್ಮಿಕರು ಸಾವು

ಜೆಸಿಬಿ ಡೋಸರ್ ಹೈಡ್ರಾಲಿಕ್ ಒಳಗೆ ಸಿಲುಕಿ ಇಬ್ಬರು ಕಾರ್ಮಿಕರು ಸಾವು

 





ವಿಜಯಪುರ; ರಸ್ತೆ ದುರಸ್ಥಿ ಕಾಮಗಾರಿ ವೇಳೆಯಲ್ಲಿ ಜೆಸಿಬಿ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆಯೊಂದು ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.


ಜೆಸಿಬಿ ಡೋಸರ್​ನ ಹೈಡ್ರಾಲಿಕ್ ಒಳಗೆ ಸಿಲುಕಿ ರಫಿಕ್ (35) ವರ್ಷ ಹಾಗೂ ಅಯುಬ್ (50) ವರ್ಷ ಮೃತಪಟ್ಟ ವ್ಯಕ್ತಿಗಳು.


ವಿಜಯಪುರ ಹೊರ ವಲಯದ ಇಂಡಿ ರಸ್ತೆ ಬಳಿಯ ತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಜೆಸಿಬಿ ಯಂತ್ರದಲ್ಲಿ ಸಿಲುಕಿ ಓರ್ವ ಚಾಲಕ ಹಾಗೂ ಓರ್ವ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ.


ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಘಟಕದಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಪಿಎಂ‌ಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಪಿಎಂಸಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم