ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್ ಸೋಂಕಿಗೆ ಎರಡು ವರ್ಷದ ಮಗು ಸಾವು

ಕೋವಿಡ್ ಸೋಂಕಿಗೆ ಎರಡು ವರ್ಷದ ಮಗು ಸಾವು




ವಿಜಯಪುರ: ಮಹಾಮಾರಿ ಕೋವಿಡ್ ಸೋಂಕಿಗೆ ವಿಜಯಪುರದ 2 ವರ್ಷದ ಮಗುವೊಂದು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.


ನಗರದ ಶಹ್ಪೇಟ್ ನಲ್ಲಿ 2 ವರ್ಷದ ಮಗು ಅತೀವ್ರ ಜ್ವರದಿಂದ ಕೆಲ ದಿನಗಳ ಹಿಂದಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕಳೆದ ವಾರ ಮೃತಪಟ್ಟಿತ್ತು ಎಂದು ವರದಿಗಳು ತಿಳಿಸಿವೆ.


ಆಗಸ್ಟ್ 14 ರಂದು ಹೆಣ್ಣು ಮಗುವಿನಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸೂಕ್ತ ಪ್ರತಿಕ್ರಿಯೆ ಸಿಗದೆ ಆಗಸ್ಟ್ 24 ರಂದು ಮಗು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم