ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನ

ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನ


ಮಂಗಳೂರು:  ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಇಂದು (ಸೆ.13) ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.


ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದ ಆಸ್ಕರ್‌ ಅವರಿಗೆ ತಲೆಯ ಒಳಭಾಗಕ್ಕೆ ಏಟು ಬಿದ್ದಿತ್ತು. ಜುಲೈ 18ರಂದು ಆಸ್ಪತ್ರೆಗೆ ಸೇರಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.


ಆಸ್ಕರ್‌ ಫರ್ನಾಂಡಿಸ್ ಅವರು 1941ರ ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದರು. 1980ರಲ್ಲಿ ಉಡುಪಿಯಿಂದ ಮೊದಲ ಬಾರಿಗೆ ಗೆದ್ದು ಲೋಕಸಭಾ ಸದಸ್ಯರಾಗಿದ್ದರು. ಅನಂತರ ನಾಲ್ಕು ಬಾರಿ ಸಂಸದರಾದರು. ಕೇಂದ್ರ ಸರಕಾರದಲ್ಲಿ ಸಾರಿಗೆ, ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.


ರಾಜಕೀಯದಲ್ಲಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಆಸ್ಕರ್ ಫೆರ್ನಾಂಡಿಸ್ ಅವರು ಪತ್ನಿ ಬ್ಲೋಸಮ್ ಫೆರ್ನಾಂಡಿಸ್, ಪುತ್ರ ಹಾಗೂ ಪುತ್ರಿ, ಅಪಾರ ಸಂಖ್ಯೆಯ ಬಂಧುಮಿತ್ರರು, ನಿಕಟವರ್ತಿಗಳು, ಅಭಿಮಾನಿಗಳನ್ನು ಅಗಲಿದ್ದಾರೆ.


ಆಸ್ಕರ್ ಫರ್ನಾಂಡಿಸ್ ಅವರಿಗೆ ಕರ್ನಾಟಕ ಯಕ್ಷಭಾರತಿ ಶ್ರದ್ಧಾಂಜಲಿ


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post