ಜೀವ ಉಳಿಸುವಲ್ಲಿ ಪ್ರಥಮ ಚಿಕಿತ್ಸೆ ಪ್ರಮುಖ ಪಾತ್ರ ವಹಿಸುತ್ತದೆ: ಸಿಎ ಶಾಂತಾರಾಂ ಶೆಟ್ಟಿ
ಪುತ್ತೂರು: ಜೀವ ಉಳಿಸುವಲ್ಲಿ ಪ್ರಥಮ ಚಿಕಿತ್ಸೆ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಥಮಚಿಕಿತ್ಸೆ ಯಾವ ಸಂದರ್ಭದಲ್ಲಿ ಹೇಗೆ ಮಾಡಬೇಕು ಎಂಬುವುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ. ನಾವು ನಮ್ಮ ಕೆಲಸಕ್ಕೆ ಎಷ್ಟೇ ಅವಸರದಲ್ಲಿ ಇದ್ದರೂ ಮಾನವೀಯತೆಯನ್ನು ಮರೆಯಬಾರದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಚೇರ್‌ಮನ್ ಸಿ.ಎ. ಶಾಂತಾರಾಮ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕರ್ನಾಟಕ ರಾಜ್ಯ ಘಟಕ, ದಕ್ಷಿಣಕನ್ನಡ ಜಿಲ್ಲಾ ಘಟಕ, ಪುತ್ತೂರು ತಾಲೂಕು ಘಟಕ, ಮಂಗಳೂರು ವಿಶ್ವವಿದ್ಯಾಲಯದ ಯೂತ್ ರೆಡ್‌ಕ್ರಾಸ್, ಪುತ್ತೂರಿನ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ, ಹಾಗೂ ಕಾಲೇಜಿನನ ಯೂತ್ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಪ್ರಥಮ ಚಿಕಿತ್ಸೆ- ತರಬೇತಿ ಹಾಗೂ ಜಾಗೃತಿ’ ಎಂಬ ವಿಷಯದ ಕುರಿತಾಗಿ ಅಂಗನವಾಡಿ ಶಿಕ್ಷಕಿಯರಿಗೆ ನಡೆದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಶ್ರೀಲತಾ, ಅಂಗನವಾಡಿ ಕಾರ್ಯಕರ್ತರಿಗೆ ಇದು ಒಂದು ಉತ್ತಮ ಕಾರ್ಯಕ್ರಮ. ಇದು ಮಕ್ಕಳ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಯೂತ್ ರೆಡ್‌ಕ್ರಾಸ್ ಘಟಕದ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮಾತನಾಡಿ, ರಾಷ್ಟç ಸೇವೆ ಎಂಬ ಧ್ಯೇಯವನ್ನು ಇಟ್ಟುಕೊಂಡು ಯುವ ರೆಡ್‌ಕ್ರಾಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಯುವಕರಲ್ಲಿ ಮಾನವೀಯ ಪ್ರಜ್ಞೆ ಬೆಳೆಸುವಲ್ಲಿ ಯುವ ರೆಡ್‌ಕ್ರಾಸ್ ಘಟಕ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುತ್ತೂರಿನ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಚೇರ್‌ಮನ್ ಆಸ್ಕರ್ ಆನಂದ್, ದಕ್ಷಿಣ ಕನ್ನಡದ ಪ್ರಥಮ ಚಿಕಿತ್ಸೆ ತರಬೇತುದಾರರಾದ ಸುಚೇತ್ ಸುವರ್ಣ ಹಾಗೂ ಅಶ್ವಿನ್ ಎಂ.ಸಿ. ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ದೇವಿಕಾ ಎಸ್. ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಅಧಿಕಾರಿ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ ವಂದಿಸಿದರು. ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಅಧಿಕಾರಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق