ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಲ್ಪ ಎಂ.ಕೆ ತೇರ್ಗಡೆ

ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಲ್ಪ ಎಂ.ಕೆ ತೇರ್ಗಡೆ



ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶಿಲ್ಪ ಎಂ.ಕೆ  ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ನೆಹರೂನಗರದ ಎಂ. ಕೃಷ್ಣ ಜೋಯಿಸ ಮತ್ತು ರಾಜೇಶ್ವರಿ ಕೆ.ಎಂ ದಂಪತಿಗಳ ಪುತ್ರಿಯಾದ ಶಿಲ್ಪ ಎಂ.ಕೆ ಮುಂದಿನ ಹಂತದ ಸಿ ಎ ಇಂಟರ್‍ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ.


ವಿದ್ಯಾರ್ಥಿನಿ ಶಿಲ್ಪ ಎಂ.ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದೊರೆತ ವಿಶೇಷ ತರಬೇತಿಯೇ ನನ್ನ ಯಶಸ್ಸಿಗೆ ಕಾರಣ. ಉಪನ್ಯಾಸಕರ ಪಠ್ಯಕ್ರಮ, ಸಲಹೆ ಸೂಚನೆಗಳು ನನ್ನಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಹಕಾರಿಯಾಗಿವೆ. ಉತ್ತಮ ಶಿಕ್ಷಣವನ್ನು ನೀಡಿದ ವಿದ್ಯಾಸಂಸ್ಥೆ, ಗುರುಹಿರಿಯರು ಮತ್ತು ಪ್ರೋತ್ಸಾಹಿಸಿದ ತಂದೆತಾಯಿಯವರಿಗೆ ಕೃತಜ್ಞನಾಗಿದ್ದೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.  


ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ. 


ಕಳೆದ ಹತ್ತು ವರ್ಷಗಳಿಂದ ಸಿಎ ಆಕಾಂಕ್ಷಿಗಳಿಗೆ ವಿಶೇಷ ತರಬೇತಿ ವ್ಯವಸ್ಥೆಯನ್ನು ಕಾಲೇಜಿನ ವತಿಯಿಂದ ಕಲ್ಪಿಸಿಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯದ ಜತೆಗೆ ಸಿಎ ಪರೀಕ್ಷೆಗೆ ಬೇಕಾದ ಸಕಲ ತರಬೇತಿ ಕಾರ್ಯವನ್ನೂ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ  ನಡೆಸಿಕೊಂಡು ಬರಲಾಗುತ್ತಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post