ಬೆಂಗಳೂರಿನ ಗಾಂಧಿ ಶಾಂತಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನಿಂದ ಕೊಡಮಾಡುವ ಪ್ರತಿಷ್ಠಿತ ‘ನೃಪತುಂಗ’ ಪ್ರಶಸ್ತಿ ಪುರಸ್ಕøತ ವಿಶ್ರಾಂತ ಕುಲಪತಿ ಹಾಗೂ ಗಾಂಧಿ ಶಾಂತಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ‘ದೇವರಾಜ ಅರಸು’ ಪ್ರಶಸ್ತಿ ಪುರಸ್ಕøತೆ ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್.ಜಿ. ಸುಶೀಲಮ್ಮ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನಾ ಕೋಶದ ರಾಜ್ಯದ ಎನ್.ಎಸ್.ಎಸ್. ಅಧಿಕಾರಿ ಪ್ರೊ. ಪ್ರತಾಪ್‍ಲಿಂಗಯ್ಯರವರನ್ನು ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಸನ್ಮಾನಿಸಿದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ.ಕೃಷ್ಣ, ಗೌ. ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಎನ್‍ವೈಕೆಎಸ್ ರಾಜ್ಯ ನಿರ್ದೇಶಕ ಎಂ.ಎನ್. ನಟರಾಜ್, ಪ್ರತಿಷ್ಠಾನದ ಗೌ. ಕಾರ್ಯದರ್ಶಿ ಡಾ.ಸತ್ಯಮಂಗಲ ಮಹಾದೇವ, ಖಜಾಂಚಿ ಡಾ.ಎಸ್.ರಾಮಲಿಂಗೇಶ್ವರ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಹಿರಿಯ ವಕೀಲ ಎಸ್. ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق