ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಕಾಲೇಜಿನಲ್ಲಿ ‘Insight into Job Entry Skill' ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ‘Insight into Job Entry Skill' ಕಾರ್ಯಕ್ರಮ


ಪುತ್ತೂರು: ಸಿವಿ ಬರೆಯುವ ಜ್ಞಾನವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಎದ್ದು ಕಾಣುವ ಹಾಗೆ ಮಾಡಲು ಕೆಲವು ಸಲಹೆ ಪಾಲಿಸುವುದು ಮುಖ್ಯ ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ವಿನುತ ಕೆ ಹೇಳಿದರು.


ಅವರು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ, ಉದ್ಯೋಗ ಹಾಗೂ ತರಬೇತಿ ಘಟಕ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ತೃತೀಯ ಬಿಕಾಂ ಪದವಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ‘Insight into Job Entry Skill'ಎಂಬ ವಿಷಯದ ಬಗ್ಗೆ ಶನಿವಾರ ಮಾತನಾಡಿದರು.


ಕಾಯಕ್ರಮದಲ್ಲಿ ಉಪಸ್ಥಿರಿದ್ದ ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ಜ್ಯೋತಿ ಎಂ.ಎಂ ಅವರು ಸಿ.ವಿ. ಬರೆಯುವ ವಿಧಾನದ ಕುರಿತಾಗಿ ಮಾತನಾಡಿ, ಸಿ ವಿ ಯನ್ನು ಗೂಗಲ್ ಡ್ರೈವ್ ಹಾಗೂ ಬೇರೆ ಬೇರೆ ಉದ್ಯೋಗದ ಪೋರ್ಟಲ್ ಗಳಲ್ಲಿ ಅಪ್ಲೋಡ್ ಮಾಡುವುದರ ಬಗ್ಗೆ ತಿಳಿದಿರಬೇಕು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಹಾಗೂ ಉದ್ಯೋಗ ಮತ್ತು ತರಬೇತಿ ಘಟಕದ ಸಂಯೋಜಕಿ ರೇಖಾ ಹಾಗೂ ಅಧ್ಯಾಪಕರು ಭಾಗವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಭಿಲಾಶ ಕಾರ್ಯಕ್ರಮನಿರ್ವಹಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post