ಪುತ್ತೂರು: ಹಿಂದಿ ಭಾಷೆ ಕೇವಲ ಭಾಷೆಯಲ್ಲ. ಅದು ಭಾರತೀಯರ ನಡುವಿನ ಕೊಂಡಿಯಾಗಿದೆ. ವಿದೇಶದಲ್ಲಿರುವ ಭಾರತೀಯರನ್ನು ಒಗ್ಗೂಡಿಸುವ ಮಾಧ್ಯಮವಾಗಿದೆ. ಹಿಂದಿ ಭಾಷೆಯಲ್ಲಿ ಹಿಂದೆ ಉದ್ಯೋಗ ಅವಕಾಶ ಕಡಿಮೆ ಇತ್ತು. ರಾಷ್ಟ್ರ ಭಾಷೆ ಎಂದು ಪರಿಗಣಿಸಿದ ನಂತರ ಉದ್ಯೋಗ ಅವಕಾಶ ಹೆಚ್ಚಿದೆ ಎಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಮುಕುಂದ ಪ್ರಭು ಹೇಳಿದರು.
ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಹಿಂದಿ ವಿಭಾಗ, ಹಿಂದಿ ಸಂಘ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ "ಹಿಂದೀ ಮೇ ರೋಜ್ಗಾರ್ ಕೀ ಸಂಭಾವ್ನಾಯೆ" ಎಂಬ ವಿಷಯದ ಬಗ್ಗೆ ಗೂಗಲ್ ಮೀಟ್ ವೇದಿಕೆಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕಾರ್ಯಾಗಾರದಲ್ಲಿ ಮಂಗಳವಾರ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಶುಭಹಾರೈಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ ದುರ್ಗಾರತ್ನಾ ಸ್ವಾಗತಿಸಿ, ಪ್ರಥಮ ಕಲಾವಿಭಾಗದ ವಿದ್ಯಾರ್ಥಿ ಕಾರ್ತಿಕ್ ಪೈ ವಂದಿಸಿದರು. ಹಿಂದಿ ವಿಭಾಗದ ಉಪನ್ಯಾಸಕಿ ಪೂಜಾ ವೈ. ಡಿ. ಕಾರ್ಯಕ್ರಮ ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment