ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೀರಿನ ತೊಟ್ಟಿಯಲ್ಲಿ ಮುಳುಗಿ 6ವರ್ಷದ ಬಾಲಕ ಸಾವು

ನೀರಿನ ತೊಟ್ಟಿಯಲ್ಲಿ ಮುಳುಗಿ 6ವರ್ಷದ ಬಾಲಕ ಸಾವು



 ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ನೀರಿನ ತೊಟ್ಟಿಯಲ್ಲಿ ಮುಳುಗಿ 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆಯೊಂದು ದಾವಣಗೆರೆ ಜಿಲ್ಲೆಯ ಸರಸ್ವತಿ ನಗರದಲ್ಲಿ ನಡೆದಿದೆ.

ದಾವಣಗೆರೆಯ ಸರಸ್ವತಿಪುರದಲ್ಲಿನ ಬಾಲಕ ಮೋಹಿತ್(6)ವರ್ಷ ಮೃತಪಟ್ಟಿದ್ದಾನೆ.

ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


ಎಲ್​ಐಸಿ ಅಧಿಕಾರಿ ಪ್ರಕಾಶ ಎಂಬವರ ಪುತ್ರ ಮೋಹಿತ್, ಆಟವಾಡಲು ಹೋಗಿ ನೀರಿನ ತೊಟ್ಟಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಅ. 18ರ ರಾತ್ರಿ ಈ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆಯಿಂದ ನಾಪತ್ತೆ ಆಗಿದ್ದ ಮೋಹಿತ್​ನನ್ನು ಕುಟುಂಬಸ್ಥರು ಹುಡುಕಾಡಿದ್ದಾರೆ. ಕೊನೆಗೆ ಮನೆಯ ಪಕ್ಕದಲ್ಲಿಯೇ ನಿರ್ಮಾಣ ಹಂತದ ಕಟ್ಟಡದಲ್ಲಿ ಪರಿಶೀಲನೆ ನಡೆಸಲಾಗಿದೆ.

ಈ ವೇಳೆ ನೀರಿನ ತೊಟ್ಟಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ತೊಟ್ಟಿ ಮುಚ್ಚದೇ ಹಾಗೆ ಬಿಟ್ಟಿರುವ ಕಾರಣ ಈ ದುರಂತ ಸಂಭವಿಸಿದೆ. ಕಟ್ಟಡ ಮಾಲೀಕರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಗುವಿನ ಶವ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದು, ಸಂಬಂಧಿಕರ ಆಕ್ರಂದನ ಮಗಿಲು ಮುಟ್ಟಿದೆ.

0 تعليقات

إرسال تعليق

Post a Comment (0)

أحدث أقدم