ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 45 ವರ್ಷದ ವ್ಯಕ್ತಿ ಯ ವಿವಾಹವಾದ 25ರ ಯುವತಿ

45 ವರ್ಷದ ವ್ಯಕ್ತಿ ಯ ವಿವಾಹವಾದ 25ರ ಯುವತಿ

 


ತುಮಕೂರು ; 45 ವರ್ಷದ ವ್ಯಕ್ತಿಯನ್ನು 25 ವರ್ಷದ ಯುವತಿ ಮದುವೆಯಾಗಿರುವ ಘಟನೆಯೊಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಎಂಬುವರ ಜೊತೆ ಮೇಘನಾ ಎಂಬ ಯುವತಿ ಮದುವೆಯಾಗಿದ್ದಾಳೆ.

45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಪತಿ ಎರಡು ವರ್ಷಗಳಿಂದ ಬಾರದ ಕಾರಣ ಆಕೆಯೇ ಹೋಗಿ 45 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ,


ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನು ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ.


0 تعليقات

إرسال تعليق

Post a Comment (0)

أحدث أقدم