ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನ್ಯಾಯಾಂಗ ಇಲಾಖೆಯ ನಿವೃತ್ತ ಶಿರಸ್ತೆದಾರ್ ಮೋಹನ್ ಹೊಳ್ಳ ರಸ್ತೆ ಅಪಘಾತದಲ್ಲಿ ಸಾವು

ನ್ಯಾಯಾಂಗ ಇಲಾಖೆಯ ನಿವೃತ್ತ ಶಿರಸ್ತೆದಾರ್ ಮೋಹನ್ ಹೊಳ್ಳ ರಸ್ತೆ ಅಪಘಾತದಲ್ಲಿ ಸಾವು




ಮಂಗಳೂರು: ನ್ಯಾಯಾಂಗ ಇಲಾಖೆಯಲ್ಲಿ 3 ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀ ಮೋಹನ್ ಹೊಳ್ಳ ಅವರು ಇಂದು ದಿನಾಂಕ 27.10.2021 ರಂದು ಕೋಟೆಕಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟರು.


ಹಾಸನ ಜಿಲ್ಲೆಯ ಅರಸೀಕೆರೆಯ ಮುನ್ಸಿಫ್ ನ್ಯಾಯಾಲಯ ದಲ್ಲಿ ದಿನಾಂಕ 17.4.1978 ರಂದು ಪ್ರಥಮ ದರ್ಜೆ ಸಹಾಯಕರಾಗಿ ಸೇವೆಗೆ ಸೇರಿದ ಮೋಹನ ಹೊಳ್ಳರು ಉಡುಪಿ; ಪುತ್ತೂರು; ಬಂಟ್ವಾಳ ಮತ್ತು ಮಂಗಳೂರಿನ ನ್ಯಾಯಾಲಯಗಳಲ್ಲಿ ಬೆಂಚ್ ಕ್ಲರ್ಕ್ ಹಾಗೂ ಶಿರಸ್ತೆದಾರ್ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ದಿನಾಂಕ 30.6.2014 ರಂದು ಸೇವೆಯಿಂದ ವಯೋನಿವೃತ್ತಿ ಹೊಂದಿದರು.


ನಿವೃತ್ತಿಯ ಬಳಿಕ ಮಂಗಳೂರು ತಾಲ್ಲೂಕಿನ  ಸೋಮೇಶ್ವರದ ಸ್ವಗೃಹದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಇಂದು ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಕೋಟೆಕಾರ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯನ್ನು ದಾಟುತ್ತಿರುವ ಸಮಯದಲ್ಲಿ ಅತಿ ವೇಗದಿಂದ ಬರುತ್ತಿದ್ದ ಮೋಟಾರ್ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಅಸುನೀಗಿದರು. ಮೃತರು ಪತ್ನಿ ಹಾಗೂ ಇಬ್ಬರು ವಿವಾಹಿತ ಪುತ್ರಿಯರನ್ನು ಅಗಲಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post