ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ರತ್ನ ಶ್ರೀ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸವನ್ನು ಅಕ್ಟೋಬರ್ 30 ಶನಿವಾರ ಸಂಜೆ 6.00 ಘಂಟೆಗೆ ನಗರದ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶರವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಜಿರೆಯ ಎಸ್‍ಡಿಎಮ್ ಪದವಿ ಕಾಲೇಜಿನ ಪ್ರಾಧ್ಯಾಪಕ ಮತ್ತು ವಿಮರ್ಶಕ ಡಾ. ರಾಜಶೇಖರ ಹಳೆಮನೆರವರು ‘ಬಸವಣ್ಣ ಮತ್ತು ಗಾಂಧೀಜಿಯವರ ಸಾಮಾಜಿಕ ಚಿಂತನೆಗಳು’ ಕುರಿತು ಉಪನ್ಯಾಸ ನೀಡಲಿದ್ದಾರೆ.
ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ವಿಶೇಷ ಆಹ್ವಾನಿತರಾಗಿ ಮತ್ತು ವಿಶ್ರಾಂತ ಪ್ರಾಂಶುಪಾಲರು ಹಾಗೂ ದತ್ತಿಯ ದಾನಿಗಳಾದ ಪ್ರೊ. ಚಂದ್ರಿಕಾ ಪುರಾಣಿಕ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق