ಕೇರಳ : ಇಲ್ಲಿಯ ಸರಕಾರ ಪ್ರತಿದಿನ 25000 ಅಯ್ಯಪ್ಪ ಸ್ವಾಮಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಿದೆ.
ಈ ಬಗ್ಗೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಮಾಹಿತಿ ನೀಡಿದ ಸಿಎಂ ಪಿಣರಾಯಿ ವಿಜಯನ್ ಈ ಬಾರಿಯ ಮಂಡಲ ಮಕರವಿಳಕ್ಕು ಉತ್ಸವಕ್ಕೆ ಸದ್ಯದ ಮಟ್ಟಿಗೆ ದಿನಕ್ಕೆ 25 ಸಾವಿರ ಮಂದಿಗೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಹೆಚ್ಚಿನ ಭಕ್ತರಿಗೆ ಅವಕಾಶ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬಾರಿ ಅಯ್ಯಪ್ಪ ದರ್ಶನಕ್ಕೆ ತೆರಳುವ ಭಕ್ತರಿಗೆ ಕೆಲವು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. 10 ವರ್ಷಕ್ಕಿಂತ ಕಡಿಮೆ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಭಕ್ತರಿಗೆ ಅವಕಾಶ ನೀಡಲಾಗಿದೆ.
ಭಕ್ತರು ಆನ್ಲೈನ್ 'ವರ್ಚುವಲ್ ಕ್ಯೂ' ವ್ಯವಸ್ಥೆಯ ಮೂಲಕ ಮುಂಗಡವಾಗಿ ಕಾಯ್ದಿರಿಸಿ ಭಕ್ತರಿಗೆ ಪ್ರತಿದಿನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಕೋವಿಡ್-19 ಲಸಿಕೆ ಪಡೆದುಕೊಂಡಿರುವ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು.
ಈ ಬಾರಿ ಭಕ್ತರು ಏರುಮಲೆ ಮತ್ತು ಪುಲ್ಮೇಡು ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಹೋಗಲು ಅನುಮತಿ ನಿರಾಕರಿಸಲಾಗಿದೆ. ಪಂಪಾ ನದಿಯಲ್ಲಿ ಸ್ನಾನ ಮಾಡಲು ಭಕ್ತರಿಗೆ ಅವಕಾಶವಿದ್ದು, ಕೋವಿಡ್-19 ನಿರ್ಬಂಧಗಳಿಂದಾಗಿ ಶಬರಿಮಲೆಯ ಸನ್ನಿಧಾನದಲ್ಲಿ ಯಾತ್ರಾರ್ಥಿಗಳಿಗೆ ಉಳಿಯಲು ಅವಕಾಶವಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ.
Post a Comment