ಬೆಂಗಳೂರು: ಸಿಟಿಯಲ್ಲಿನ ತಾಯಿ, ಎರಡೂವರೆ ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಿರುವ ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಘಟನೆ ನಡೆದಿದೆ.
ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಇಂದು ಮುಂಜಾನೆ ತಾಯಿ-ಮಗುವಿನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಗಂಡ ಮುಂಜಾನೆ ಕೆಲಸಕ್ಕೆ ಹೋದ ಬಳಿಕ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ವೇಳೆಗೆ ಸಂಬಂಧಿಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
إرسال تعليق