ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಬುಧವಾರ ರಾತ್ರಿಯ ಮಳೆ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 7 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಧಾರಾಕಾರವಾಗಿ ಸುರಿದ ಮಳೆಗೆ ಮನೆ ಕುಸಿದು 7 ಮಂದಿ ಸಾವನ್ನಪ್ಪಿದ್ದು, ಮೃತರಿಗೆ ಸಂತಾಪ ಸೂಚಿಸಿರುವ ಸಿಎಂ ಬೊಮ್ಮಾಯಿಯವರು, ಮನೆ ಕುಸಿತದಿಂದ ಸಂಭವಿಸಿದ ಈ ದುರಂತದಿಂದ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವುದು ನನಗೆ ಬಹಳ ದುಃಖ ತಂದಿದೆ. ಮೊದಲಿಗೆ ನಾನು ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಪರಿಹಾರ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ ಸಿಎಂ, ಬೆಳಗಾವಿ ಡಿಸಿ ಎಂ.ಜಿ. ಹಿರೇಮಠ ಅವರ ಜೊತೆ ಮಾತನಾಡಿದ್ದಾರೆ.
ತಕ್ಷಣ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
إرسال تعليق