ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 4 ವರ್ಷದ ಮಗುವಿನ ಮೇಲೆ ಕಾರು ಹರಿದ ಪರಿಣಾಮ ಮಗು ಸಾವು

4 ವರ್ಷದ ಮಗುವಿನ ಮೇಲೆ ಕಾರು ಹರಿದ ಪರಿಣಾಮ ಮಗು ಸಾವು

 


ವಿಜಯನಗರ : ವಿಜನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಕಾರು ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.


ಚಾಲಕನ ಅಜಾಗರೂಕತೆಯಿಂದ ಕಾರು ಮಗುವಿನ ಮೇಲೆ ಹರಿದು ಹನುಮಂತ (4) ವರ್ಷ ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿನ ತಾಯಿ ರೂಪ ಗಾಯಗೊಂಡಿದ್ದಾರೆ.

ಗಾಯಗೊಂಡ ಗರ್ಭಿಣಿ ರೂಪಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಮೃತ ಮಗು ಹರಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದ ಕೋಟೆಪ್ಪ ಮತ್ತು ರೂಪ ದಂಪತಿಯ ಮಗುವಾಗಿದೆ.

ಸರ್ಕಾರಿ ಆಸ್ಪತ್ರೆಯ ನೌಕರ ರವಿ (22)ವರ್ಷ ಅಜಾಗರುಕತೆಯಿಂದ ಕಾರು ಚಾಲನೆ ಮಾಡಿದ್ದಾನೆ. ಎಂದು ಆರೋಪಿಸಲಾಗಿದ್ದು, ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم