ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರೇಬೀಸ್‌ ಗೆ ತುತ್ತಾಗಿ ಕಾಲೇಜು ವಿದ್ಯಾರ್ಥಿನಿ ಬಲಿ

ರೇಬೀಸ್‌ ಗೆ ತುತ್ತಾಗಿ ಕಾಲೇಜು ವಿದ್ಯಾರ್ಥಿನಿ ಬಲಿ

 


ಕಡಬ; ಹುಚ್ಚು ನಾಯಿಯ ವೈರಸ್‌ಗೆ ತುತ್ತಾಗಿ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆಯೊಂದು ಕಡಬದ ಆಲಂಕಾರಿನಲ್ಲಿ ನಡೆದಿದೆ.


ಮೃತಳನ್ನು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ, ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ (17) ವರ್ಷ ಎಂದು ಗುರುತಿಸಲಾಗಿದೆ.


ಗುರುವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ತಲೆನೋವು ಕಾಣಿಸಿಕೊಂಡ ಕಾರಣ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದ್ದು, ಸಂಜೆ ವೇಳೆ ತಲೆನೋವು ಉಲ್ಬಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ಸೇರಿಸಿ ಬಳಿಕ ಮಂಗಳೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. 


ಆದರೆ ಈಕೆಗೆ ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.


ಸುಮಾರು 4 ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿ ದಾಳಿ ಮಾಡಿದ್ದು, ಈ ವೇಳೆ ಅಲಂಕಾರು ಪೇಟೆಯಲ್ಲಿರುವ ಬೀದಿ ನಾಯಿ ಸೇರಿದಂತೆ ಇಬ್ಬರ ಮೇಲೆ ದಾಳಿ ನಡೆಸಿತ್ತು. 


ಮೃತ ವಿದ್ಯಾರ್ಥಿನಿಯ ಮನೆಯ ನಾಯಿಯು ಕೆಲವು ತಿಂಗಳುಗಳ ಹಿಂದೆ ರೇಬೀಸ್‌ಗೆ ಒಳಗಾಗಿ ಸತ್ತು ಹೋಗಿತ್ತು. ಅದೇ ನಾಯಿಯ ವೈರಸ್ ವಿದ್ಯಾರ್ಥಿನಿಗೂ ತಗಲಿರ ಬಹುದೆಂದು ಶಂಕಿಸಲಾಗಿದೆ.

0 Comments

Post a Comment

Post a Comment (0)

Previous Post Next Post