ಮಂಗಳೂರು: ಶರನ್ನವರಾತ್ರಿ ಪ್ರಯುಕ್ತ ವಿಜಯದಶಮಿಯಂದು ಕುರು ಅಂಬಾ ಶ್ರೀ ರಾಜರಾಜೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಸರಯೂ ಬಾಲ ಯಕ್ಷ ವೃಂದ (ರಿ.) ಕೋಡಿಕಲ್ ವತಿಯಿಂದ ಶ್ರೀ ಏಕಾದಶೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಬೆಳಿಗ್ಗೆ 9.30ಕ್ಕೆ ಸಂಪನ್ನಗೊಳ್ಳಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಾಜೇಶ್ ಜಿ.ಎಸ್ ವಹಿಸಿಕೊಳ್ಳಲಿದ್ದಾರೆ. ದೇವಸ್ಥಾನದ ಮೊಕ್ತೇಸರ ಶ್ರೀ ಪಿ. ಮಹಾಬಲ ಚೌಟ, ಉದ್ಯಮಿ ಶ್ರೀ ಪುಷ್ಪರಾಜ್ ಶೆಟ್ಟಿ, 17 ನೇ ವಾರ್ಡ್ ನ ಕಾರ್ಪೊರೇಟರ್ ಶ್ರೀ ಮನೋಜ್ ಕುಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸರಯೂ ಸಂಸ್ಥೆಯ ಗೌರವ ಸಂಚಾಲಕ ಶ್ರೀ ಹರಿಕೃಷ್ಣ ಪುನರೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق