ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಸ್‌ ಎಸ್ ಎಲ್ ಸಿ ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಎಸ್‌ ಎಸ್ ಎಲ್ ಸಿ ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

 


ಬೆಂಗಳೂರು: ಎಸ್‌ಎಸ್‌ಎಲ್ಸಿಯಲ್ಲಿ ಶೇಕಡ 60 ರಷ್ಟು ಅಂಕ ಗಳಿಸಿದವರಿಗೆ ತಲಾ 2000 ರೂ., ಶೇಕಡ 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹಧನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಸಮಸ್ಯೆ ಬಗೆಹರಿಸಲಾಗಿದೆ.

ಶೇಕಡ 60 ಕ್ಕಿಂತ ಹೆಚ್ಚು ಅಂಕ ಪಡೆದ ತಲಾ 2000 ರೂ., ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ 15 ಸಾವಿರ ಪ್ರೋತ್ಸಾಹ ಧನ ನೀಡಲಿದ್ದು ಇದಕ್ಕಾಗಿ 51 ಕೋಟಿ ರೂಪಾಯಿ ವೆಚ್ಚ ಭರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ

0 تعليقات

إرسال تعليق

Post a Comment (0)

أحدث أقدم