ಬೆಂಗಳೂರು: ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸ್ಟೋಟಗೊಂಡ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮನೆಯಲ್ಲಿ ನಡೆದಿದೆ.
ಸಿಲಿಂಡರ್ ಸ್ಫೋಟದ ರಭಸಕ್ಕೆ ಮಗು ಸೇರಿ ಮೂವರಿಗೆ ಗಾಯವಾಗಿದ್ದು, ಸದ್ಯ ಮನೆಯಲ್ಲಿದ್ದವರೆಲ್ಲಾ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಪೋಟದ ತೀವ್ರತೆಗೆ ಮನೆಯ ಸಿಮೆಂಟ್ ಶೀಟ್ ಛಾವಣಿ ಛಿದ್ರವಾಗಿದೆ.
ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق