ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನ ಸಾರಕ್ಕಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ರಾಜ್ಯದಲ್ಲಿ ಸುಮಾರು 15 ಸಾವಿರ ಶಿಕ್ಷಕರ ಕೊರತೆಯಿದ್ದು, 3 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಿಇಟಿ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Post a Comment