ತುಮಕೂರು : ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದವರ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸಲಹೆ ನೀಡಿದ್ದೇನೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ ಈ ಹಿಂದೆ ಕೋವಿಡ್ ಲಸಿಕೆ ಇಲ್ಲ ಎನ್ನುತ್ತಿದ್ದರು. ಈಗ ಕೋವಿಡ್ ಲಸಿಕೆ ಲಭ್ಯವಿದ್ದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ.
ಕೋವಿಡ್ ತಡೆಗಟ್ಟಲು ಎಲ್ಲರಿಗೂ ಲಸಿಕೆ ಹಾಕುವುದು ಅನಿವಾರ್ಯವಾಗಿದ್ದು, ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಕೋವಿಡ್ ಸೋಂಕು ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು.
ಹೀಗಾಗಿ ಕೋವಿಡ್ ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
إرسال تعليق