ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ: ಡಾ. ಚೂಂತಾರು

ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ: ಡಾ. ಚೂಂತಾರು



ಮಂಗಳೂರು: ಶನಿವಾರದಂದು ಗಾಂಧಿ ಜಯಂತಿ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲಿ ಮೋಹನ್ ಚೂಂತಾರು ಅವರು ಮಾತನಾಡಿ “ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು, ಅವರ ಆದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ತುರ್ತು ಅಗತ್ಯ ಈಗ ಇದೆ. ಪ್ರತಿಯೊಬ್ಬರಲ್ಲಿಯೂ ಗಾಂಧೀಜಿಯವರ ಆದರ್ಶಗಳು ಇದ್ದರೂ ಯಾರು ಅದನ್ನು ಪರಿಣಾಮಕಾರಿಯಾಗಿ ಪಾಲಿಸುತ್ತಿಲ್ಲ. ಈ ಸುಪ್ತವಾಗಿರುವ ಪ್ರಜ್ಞೆಗಳನ್ನು ಬಡಿದೆಬ್ಬಿಸಬೇಕಾದ ಅನಿವಾರ್ಯತೆ ಇದೆ. ಇದರಲ್ಲೂ ಯುವಜನತೆಯಲ್ಲಿ ಸುಪ್ತವಾಗಿರುವ ಗಾಂಧಿ ಪ್ರಜ್ಞೆಯನ್ನು ಬಡಿದೆಬ್ಬಿಸಬೇಕಾದ ತುರ್ತು ಅಗತ್ಯ ಇದೆ. ಆಗ ಮಾತ್ರ ಸುಭೀಕ್ಷ ಹಾಗೂ ಆರೋಗ್ಯ ಪೂರ್ಣ ಭವ್ಯ ಭಾರತದ ನಿರ್ಮಾಣ ಸಾಧ್ಯ ಮತ್ತು ಗಾಂಧೀಜಿಯವರು ಕನಸು ಕಂಡ ರಾಮ ರಾಜ್ಯದ ನಿರ್ಮಾಣ ಸಾಧ್ಯವಿದೆ” ಎಂದು ನುಡಿದರು.


ಅದೇ ರೀತಿ ದೇಶದ ಎರಡನೇ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವೂ ಆಗಿರುತ್ತದೆ. ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಯುಕ್ತಿಯೊಂದಿಗೆ ದೇಶದ ಎಲ್ಲೆಡೆ ಸಂಚಲನ ಮೂಡಿಸಿ ರೈತರೇ ದೇಶದ ಬೆನ್ನೆಲುಬು ಎಂದು ಹೇಳಿ ಕ್ರಾಂತಿಯನ್ನುಂಟುಮಾಡಿದರು. ವೈಟ್ ರೆವ್ಯುಲೇಶನ್ ಸಹ ಮಾಡಿದರು. ಅಂತಹ ಅಪ್ರತಿಮ ದೇಶಭಕ್ತ ಅಪ್ಪಟ ದೇಶಾಭಿಮಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದಂದು ನಾವೆಲ್ಲ ಮಗದೊಮ್ಮೆ ನಮ್ಮನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳೋಣ ಎಂದರು.


ಈ ಸಂದರ್ಭದಲ್ಲಿ ಮಂಗಳೂರು ಘಟಕದ ಹಿರಿಯ ಗೃಹರಕ್ಷಕರಾದ ಸುನಿಲ್ ಕುಮಾರ್, ರಾಜಶ್ರೀ ಮತ್ತು ಗೃಹರಕ್ಷಕರಾದ ಭವಾನಿ, ಮಂಜುಳಾ, ರೇಷ್ಮಾ, ಗಾಯತ್ರಿ, ಜಯಂತಿ, ರೇವತಿ, ಸಬಿತಾ, ಸಂದೇಶ್, ದುಷ್ಯಂತ್‍ರೈ, ದಿವಾಕರ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم