ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ ಇದರ ಸಹಯೋಗದೊಂದಿಗೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಇವರು ವಹಿಸಿದ್ದು, ಐಕ್ಯೂಎಸಿ ಯ ಸಂಚಾಲಕರಾದ ಪ್ರೊ. ರವಿಶಂಕರ್ ಬಿ. ಇವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮವು ಸ್ಮಿತಾ ಇವರ ನಿರೂಪಣೆಯೊಂದಿಗೆ ಸಾಗಿ ಸರ್ವಧರ್ಮ ಪ್ರಾರ್ಥನೆ, ಸರ್ವಧರ್ಮ ಗ್ರಂಥಗಳ ವಾಚನ ಮತ್ತು ಗಾಂಧೀಜಿ ಹಾಗೂ ಶಾಸ್ತ್ರಿಯವರಿಗೆ ಪುಷ್ಪವನ್ನು ಅರ್ಪಿಸಿ, ಅವರನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಅವರನ್ನು ಕುರಿತು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಕೆ. ಸುರಕ್ಷಾ ಹಾಗೂ ಕುಸುಮಾವತಿ ಇವರು ಮಾತನಾಡಿದರು. ಗಾಂಧಿ ಜಯಂತಿಯ ಪ್ರಯುಕ್ತ ಒಂದು ಗಂಟೆಯ ಸ್ವಚ್ಛತಾ ಕಾರ್ಯಕ್ರಮವನ್ನು ಕಾಲೇಜಿನ ಆವರಣ ಸ್ವಚ್ಛಗೊಳಿಸುವ ಮೂಲಕ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment