ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿನಿಲಯದಲ್ಲಿ ಗಾಂಧೀ ಜಯಂತಿ ಆಚರಣೆ

ವಿದ್ಯಾರ್ಥಿನಿಲಯದಲ್ಲಿ ಗಾಂಧೀ ಜಯಂತಿ ಆಚರಣೆ


ಮಂಗಳೂರು: ಯಾವುದೇ ವ್ಯಕ್ತಿಯ ಅಭಿವೃದ್ಧಿಗೆ ಸಮಯ ಪಾಲನೆಯ ಜೊತೆಗೆ ದೈಹಿಕ ಹಾಗೂ ಮಾನಸಿಕ ಸ್ವಚ್ಛತೆ ಅತ್ಯಂತ ಮಹತ್ವದ್ದು, ಎಂದು ಮಹಾನಗರಪಾಲಿಕೆ ಸದಸ್ಯೆ ವಿಜಯಲಕ್ಷ್ಮಿ ಅಭಿಪ್ರಾಯಪಟ್ಟರು.


ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಅಶೋಕ ನಗರದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಹಾತ್ಮ ಗಾಂಧೀಜಿಯವರ ಸ್ವರಾಜ್ಯ ಕಲ್ಪನೆ ಮಹತ್ತರವಾದದ್ದು ಎಂದು ತಿಳಿಸಿದರು.


ಮೇಲ್ವಿಚಾರಕರಾದ ಹೇಮಂತ್ ಕುಮಾರ್  ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಲವು ಅಧಿಕಾರಿಗಳು, ವಸತಿ ನಿಲಯದ ಸಿಬ್ಬಂದಿ ಇದ್ದರು. ಶಂಕರ್ ಓಬಳಬಂಡಿ ಕಾರ್ಯಕ್ರಮ ನಿರೂಪಿಸಿದರೆ, ಮಾಲ್ತೇಶ್ ಧನ್ಯವಾದ ಸಮರ್ಪಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم