ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗ್ಯಾಸ್ ಟ್ಯಾಂಕರ್ ಸ್ಫೋಟ; ಭಾರೀ ಅನಾಹುತ

ಗ್ಯಾಸ್ ಟ್ಯಾಂಕರ್ ಸ್ಫೋಟ; ಭಾರೀ ಅನಾಹುತ

 


ಉತ್ತರ ಕನ್ನಡ: ಇಂದು ಬೆಳ್ಳಂಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟಕೊಂಡಿದ್ದು, ಭಾರೀ ಅನಾಹುತಕ್ಕೆ ಕಾರಣವಾಗಿದೆ.

ಬೆಳಿಗ್ಗೆ 5.30ರ ಹೊತ್ತಿಗೆ ಈ ಘಟನೆ ಸಂಭವಿಸಿದ್ದು, ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟ ಗೊಂಡಿದೆ. 5.30ರಿಂದ 5.45ರ ನಡುವೆ ಅಂಕೋಲ ಭಾಗದ ಕಡೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದಿಂದ ಘಾಟಿಯಲ್ಲಿ ಪಲ್ಟಿಯಾಗಿ ಸ್ಫೋಟಗೊಂಡಿದೆ.



ಈ ವೇಳೆ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ತಕ್ಷಣದಲ್ಲಿ ಆತನನ್ನು ರಕ್ಷಣೆ ಮಾಡಲಾಗಿದೆ. ಗ್ಯಾಸ್ ಟ್ಯಾಂಕರ್ ಸ್ಫೋಟದಿಂದಾಗಿ ಸುತ್ತಮುತ್ತ 400 ರಿಂದ 500 ಮೀಟರ್ ಬೆಂಕಿ ವ್ಯಾಪಿಸಿದೆ. ಈ ವಿಷಯ ತಿಳಿದ ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಅಗಮಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post