ತುಮಕೂರು: ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ತುಮಕೂರು ಜಿಲ್ಲೆ ಹುಳಿಯಾರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ನೌಕರರ ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ.
ಸಾರಿಗೆ ಸಂಚಾರ ನಿಯಂತ್ರಕರು, ನಾಲ್ಕು ವರ್ಷಕ್ಕೆ ಒಮ್ಮೆ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗುತ್ತದೆ.
2016 ರಿಂದ ವೇತನ ಹೆಚ್ಚಳ ಮಾಡಿಲ್ಲ ಎಂದು ಸಚಿವರ ಗಮನ ಸೆಳೆದರು. ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ.
2020ರಲ್ಲಿ ವೇತನ ಹೆಚ್ಚಳ ಮಾಡಬೇಕಿದ್ದರೂ ಇದುವರೆಗೆ ಮಾಡಿಲ್ಲವೆಂದು ತಿಳಿಸಿದ್ದಕ್ಕೆ ಸ್ಪಂದಿಸಿದ ಸಚಿವ ಶ್ರೀರಾಮುಲು ಶೀಘ್ರವೇ ವೇತನ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
إرسال تعليق