ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೀಪಾವಳಿ ಗೆ ಊರಿಗೆ ತೆರಳುವವರಿಗೆ ಕೆಎಸ್ ಆರ್ ಟಿಸಿ ಯಿಂದ ಗುಡ್ ನ್ಯೂಸ್

ದೀಪಾವಳಿ ಗೆ ಊರಿಗೆ ತೆರಳುವವರಿಗೆ ಕೆಎಸ್ ಆರ್ ಟಿಸಿ ಯಿಂದ ಗುಡ್ ನ್ಯೂಸ್

 


ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ಕೊಟ್ಟಿದ್ದು, ನವೆಂಬರ್ 7 ರವರೆಗೆ 1 ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 


ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ಹಾಗೂ ಅಂತರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೋಟಯಂ, ಚೆನ್ನೈ, ಕೊಯಮತ್ತೂರು, ಪುಣೆ, ಪಣಜಿಗೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ಸೇವೆ ಇರಲಿವೆ ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ.

ಪ್ರಯಾಣಿಕರು ನಿಗಮದ ವೆಬ್‍ಸೈಟ್ www.ksrtc.karnataka.gov.in ಹಾಗೂ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post