ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್ ಸೈಕಲ್ ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ

4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್ ಸೈಕಲ್ ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ



 ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಇದೀಗ 4 ವರ್ಷಕ್ಕಿಂತ ಕಡಿಮೆ ವರ್ಷದ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸದಾದ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, 'ಮೋಟಾರ್ ಸೈಕಲ್‌ ಹಿಂಬದಿಯಲ್ಲಿ ಕುಳಿತ ಮಗುವನ್ನು ಸವಾರನೊಂದಿಗೆ ಕೂಡಿಸುವಂತಹ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು' ಎಂದಿದ್ದಾರೆ.


ಹಾಗೆಯೇ ಹಿಂಬದಿ ಸೀಟಿನಲ್ಲಿ ಕುಳಿತು ಪ್ರಯಾಣಿಸುವ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಕ್ರ್ಯಾಶ್ ಹೆಲ್ಮೆಟ್ ಧರಿಸಿರಬೇಕು. 4 ವರ್ಷ ಪ್ರಾಯದ ಮಗುವಿನೊಂದಿಗೆ ಹೋಗುವಾಗ ಮೋಟಾರ್‌ ಸೈಕಲ್‌ ಚಲಿಸುವ ವೇಗವು ಗಂಟೆಗೆ 40 ಕಿ.ಮೀ.ಗಿಂತ ಹೆಚ್ಚಿರಬಾರದು' ಎಂದು ತಿಳಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم