ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪತ್ರಕರ್ತ ಫಾರೂಕ್ ಬಂಟ್ವಾಳ ನಿಧನ

ಪತ್ರಕರ್ತ ಫಾರೂಕ್ ಬಂಟ್ವಾಳ ನಿಧನ

 



ಬಂಟ್ವಾಳ: ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ (45) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.


ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.


ಗ್ರಾಪಂ.ಸದಸ್ಯರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಮಕ್ಕಳ ಹಕ್ಕಿನ ಬಗ್ಗೆಯು ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದರಲ್ಲದೆ‌ ಸಾಮಾಜಿಕ ಚಟುವಟಿಕೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ತಾಯಿ, ಪತ್ನಿ ಹಾಗೂ ಒಂದು ಹೆಣ್ಣುಮಗುವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಂಟ್ವಾಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಶೋಕ ವ್ಯಕ್ತಪಡಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post