ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅ.8 ರಂದು ಏಳು ವಿಭಾಗಗಳಲ್ಲಿ 'ಕನಕ ಕೀರ್ತನ ಗಂಗೋತ್ರಿ' ಗಾಯನ

ಅ.8 ರಂದು ಏಳು ವಿಭಾಗಗಳಲ್ಲಿ 'ಕನಕ ಕೀರ್ತನ ಗಂಗೋತ್ರಿ' ಗಾಯನ


ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ನಡೆಯಲಿರುವ 'ಕನಕ ಕೀರ್ತನ ಗಂಗೋತ್ರಿ' ಕಾರ್ಯಕ್ರಮದ ಉದ್ಘಾಟನೆ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.


ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಮನ್ವಯಾಧಿಕಾರಿ, ಗಮಕಿ ಎಂ.ಆರ್. ಸತ್ಯನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿರುವರು. ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ, ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ, ಮಂಗಳೂರು ವಿವಿಯ ಶಾಲಾ ದತ್ತು ಸ್ವೀಕಾರ ಯೋಜನೆಯ ಸಂಯೋಜಕ ಪ್ರೊ. ಪ್ರಶಾಂತ್ ನಾಯ್ಕ್, ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಭಾಗವಹಿಸಲಿದ್ದಾರೆ.


ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸಂಯೋಜಿತ ಹಾಗೂ ಸ್ವಾಯತ್ತ ಕಾಲೇಜುಗಳ ಪದವಿ, ಸ್ನಾತಕೋತ್ತರ ಪದವಿ, (ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ವೈದ್ಯಕೀಯ ಶಿಕ್ಷಣ, ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿವಿಗಳ ವಿದ್ಯಾರ್ಥಿಗಳು ಸೇರಿ), ಬೋಧಕ, ಬೋಧಕೇತರ ಹಾಗೂ ಸಾರ್ವಜನಿಕ ಎಂಬ ಏಳು ವಿಭಾಗಗಳಲ್ಲಿ ಕನಕ ಕೀರ್ತನೆ ಗಾಯನ ಕಾರ್ಯಕ್ರಮ ನಡೆಯಲಿದೆ.


ಪ್ರತಿ ವಿಭಾಗದಲ್ಲಿ ಮೂರು ಅತ್ಯುತ್ತಮ ಗಾಯಕರಿಗೆ 'ಕನಕ ಸ್ಮೃತಿ' ಕಾರ್ಯಕ್ರಮದಲ್ಲಿ  ಕನಕ ಪುರಸ್ಕಾರ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ರೂ.2000 ನಗದು ಬಹುಮಾನ ನೀಡಲಾಗುವುದು. ಆಸಕ್ತರು 9591480138 ಸಂಖ್ಯೆಯನ್ನು ಸಂಪರ್ಕಿಸಬೇಕೆಂದು ಕೇಂದ್ರದ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post