ಬೆಂಗಳೂರು : ಮನೆಯ ಶೀಟ್ ಆಂಗಲ್ ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ರಾಜರಾಜೇಶ್ವರಿ ನಗರದ ಮರಪ್ಪ ಲೇಔಟ್ ನಲ್ಲಿ ನೆಡೆದಿದೆ.
ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು , ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನೇಣಿಗೆ ಶರಣಾದ ಯುವಕ ಕಾರ್ತಿಕ್ ಜಿಮ್ ಟ್ರೈನಿಯಾಗಿದ್ದು , ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕಾರ್ತಿಕ್ನಿಂದ ಯುವತಿ ದೂರವಾಗಿದ್ದಳು ಎನ್ನಲಾಗಿದೆ . ಈ ವಿಚಾರ ತಿಳಿದ ಪೋಷಕರು ಮದುವೆ ಮಾಡಲು ಮುಂದಾಗಿದ್ದರು . ಇಂದು ಕಾರ್ತಿಕ್ಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ ಪೋಷಕರು ಹೋಗಬೇಕಿತ್ತು .
ಅದರೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊಬೈಲ್ ಪೊಲೀಸರು ವಶಕ್ಕೆ ಪಡೆದಿದ್ದು, ವಿಡಿಯೋ ಆಧಾರದ ಮೇಲೆ ಪೊಲೀಸರು ತನಿಖೆ ನೆಡೆಸುತ್ತಿದ್ದಾರೆ. ಆರ್ . ಆರ್ . ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment