ಕೂಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು. ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ ಮರೆಯಲಾದ ಪಾಠ ಕಲಿಸುತ್ತೇವೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು:
ಪೊಲೀಸ್ ಗುಪ್ತಚರ ವ್ಯವಸ್ಥೆ ಬಲಪಡಿಸಿ, ಹಿಂದೂ `ಪೂಜಾ ಸ್ಥಳಗಳನ್ನು ಭಗ್ನಗೊಳಿಸುವ ಮೂಲಕ ಕ್ಷೇತ್ರದಲ್ಲಿ ಕೋಮು `ಭಾವನೆ ಕೆರಳಿಸುವವರ ವಿರುದ್ದ ವಿಶೇಷ ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.
ಬೈಕಂಪಾಡಿಯಲ್ಲಿ ಕರ್ಕೇರ ನಾಗ ಮೂಲಸ್ಥಾನ ವಿಗ್ರಹ ಭಗ್ನ ಘಟನೆ ಬಳಿಕ ಕೆಲವೇ ದಿನದ ಅಂತರದಲ್ಲಿ ಇದೀಗ ಕೂಳೂರಿನಲ್ಲಿ ನಡೆದಿದೆ. ನನ್ನ ಕ್ಷೇತ್ರದಲ್ಲಿ ಕೋಮು ಸಂಘರ್ಷ ಉಂಟು ಮಾಡಲು ಷಡ್ಯಂತ್ರ ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ದೇವಸ್ಥಾನ, ನಾಗಬನ, ದೈವಸ್ಥಾನಗಳು ಹಿಂದೂಗಳ ಪೂಜನೀಯ ಸ್ಥಳಗಳಾಗಿದ್ದು ಇವುಗಳನ್ನು ಧ್ವಂಸಗೊಳಿಸುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಜೈಲಿಗೆ ತಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಈ ರೀತಿಯ ಹೀನ ಕೃತ್ಯ ಮಾಡುವ ಅಪರಾಧಿಗಳನ್ನು ಮಟ್ಟ ಹಾಕುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಕಾವೂರು ಪೊಲೀಸ್ ಠಾಣೆಯ ಅಧಿಕಾರಿಗಳು,ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಸಂಘಟನೆಯ ಮುಖಂಡರಾದ ಭುಜಂಗ ಕುಲಾಲ್, ಪುನೀತ್ ಅತ್ತಾವರ, ಬಿಜೆಪಿ ಮುಖಂಡರು, ನಾಗಬನಕ್ಕೆ ಸಂಬಂಧಪಟ್ಟ ಮನೆಯವರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment