ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೈಸೂರು; ಇಂದು ಮಾವುತರಿಗೆ ಉಪಹಾರ ಬಡಿಸಿದ ಸಚಿವ ಎಸ್.ಟಿ ಸೋಮಶೇಖರ್

ಮೈಸೂರು; ಇಂದು ಮಾವುತರಿಗೆ ಉಪಹಾರ ಬಡಿಸಿದ ಸಚಿವ ಎಸ್.ಟಿ ಸೋಮಶೇಖರ್

 


ಮೈಸೂರು - ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಅರಮನೆ ಆವರಣದಲ್ಲಿ ಇಂದು ಬೆಳಗ್ಗಿನ ವೇಳೆ ಮಾವುತರು ಮತ್ತು ಕಾವಾಡಿಗರಿಗೆ ಏರ್ಪಡಿಸಲಾದ ಉಪಹಾರ ಕೂಟದಲ್ಲಿ ಭಾಗವಹಿಸಿದ್ದರು.


ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮೈಸೂರು ಜಿಲ್ಲಾಡಳಿತ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. 


ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾವುತರಿಗೆ ಉಪಹಾರ ಬಡಿಸಿದರು. 


ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿ ಅವರ ಯೋಗಕ್ಷೇಮ ವಿಚಾರಿಸಿದರು.


 ಮಾವುತರ ಜೊತೆಗೆ ಸಚಿವರು ಉಪಹಾರ ಸೇವಿಸಿದರು. ಈ ವೇಳೆ ಸಚಿವರ ಜೊತೆ ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಜಿಲ್ಲಾಕಾರಿ ಡಾ.ಬಗಾದಿ ಗೌತಮ್, ನಗರ ಪೋಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

0 تعليقات

إرسال تعليق

Post a Comment (0)

أحدث أقدم