ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ ಚಿರಂಜೀವಿ ಸರ್ಜಾ ಹುಟ್ಟು ಹಬ್ಬ ದಿನದಂದು ಹೊಸ ಚಿತ್ರ ನಿರ್ಮಾಣಕ್ಕೆ ಆರಂಭ

ನಟ ಚಿರಂಜೀವಿ ಸರ್ಜಾ ಹುಟ್ಟು ಹಬ್ಬ ದಿನದಂದು ಹೊಸ ಚಿತ್ರ ನಿರ್ಮಾಣಕ್ಕೆ ಆರಂಭ

 


ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಮೇಘನಾ ರಾಜ್‌ ಅವರು  ಪ್ರಧಾನ ಪಾತ್ರದಲ್ಲಿ ಅಭಿನಯಿಸಲಿರುವ ನೂತನ ಚಿತ್ರ ನಿರ್ಮಾಣ ಆರಂಭವಾಗಲಿದೆ.


ಪಿ.ಬಿ.ಸ್ಟುಡಿಯೋಸ್ ಲಾಂಛನದಲ್ಲಿ ನೂತನ ಚಿತ್ರ ನಿರ್ಮಾಣವಾಗುತ್ತಿದೆ. ಪನ್ನಗಾಭರಣ, ಹೊಸ ಪ್ರತಿಭೆ ನಿರ್ದೇಶಕ ವಿಶಾಲ್ ಹಾಗೂ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮೊದಲಾದವರು ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿರಂಜೀವಿ ಸರ್ಜಾ ಅವರೊಂದಿಗೆ ಸೇರಿ ಚಿತ್ರ ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು, ಆದರೆ ಆಗಲಿಲ್ಲ. ಈಗ ಈ ನೂತನ ಚಿತ್ರ ಅಕ್ಟೋಬರ್ 17 ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದಂದೇ ಆರಂಭವಾಗುತ್ತಿದೆ.

ಸಂತೋಷದ ವಿಚಾರವೆಂದರೆ ನಟಿ ಮೇಘನಾರಾಜ್ ಅವರು ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ಆರಂಭೋತ್ಸವಕ್ಕೆ ನಿರ್ದೇಶಕ ಟಿ.ಎಸ್.ನಾಗಾಭರಣ, ನಟ ಸುಂದರರಾಜ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಆಗಮಿಸಿ ಶುಭಕೋರಲಿದ್ದಾರೆ.


0 Comments

Post a Comment

Post a Comment (0)

Previous Post Next Post