ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಫೀಸಿಗಾಗಿ ಒತ್ತಡ: ಖಾಸಗಿ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಫೀಸಿಗಾಗಿ ಒತ್ತಡ: ಖಾಸಗಿ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ


ಮಂಗಳೂರು: ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. 


ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ನೀನಾ ಸತೀಶ್‌ (19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜಿನ ಹಾಸ್ಟೇಲ್‌ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಕಾಸರಗೋಡು ಮೂಲದ ನೀನಾ ಅವರು ನಗರದ ಕೊಲಾಸೋ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ನರ್ಸಿಂಗ್‌ ವಿದ್ಯಾಭ್ಯಾಸಕ್ಕಾಗಿ ಕಾಲೇಜಿಗೆ 75 ಸಾವಿರ ರೂಪಾಯಿ ಫೀಸ್‌ ಪಾವತಿಸಿದ್ದರು. ಉಳಿದ ಹಣವನ್ನು ಪಾವತಿ ಮಾಡುವಂತೆ ಕಾಲೇಜಿನ ಆಡಳಿತ ಮಂಡಳಿ ಕೇಳುತ್ತಿದೆ. ಹಣ ಪಾವತಿ ಮಾಡದಿದ್ದರೆ ಯೂನಿಫಾರ್ಮ ನೀಡುವುದಿಲ್ಲ ಎಂದು ಬೆದರಿಕೆಯೊಡ್ಡಿದೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನೀನಾ ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.


ಕೊಲಾಸೋ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ಗೆ 1.25 ಲಕ್ಷ ರೂಪಾಯಿ ಶುಲ್ಕ ಕಟ್ಟಬೇಕಾಗಿತ್ತು. ನೀನಾ 75 ಸಾವಿರ ಪಾವತಿ ಮಾಡಿದ್ದರು. ತಾಯಿ ಕೂಲಿ ಕೆಲಸ ಮಾಡಿ ಮಗಳಿಗೆ ವಿದ್ಯಾಭ್ಯಾಸ ಮಾಡಿಸುತ್ತಿರುವುದರಿಂದ ನೀನಾಗೆ ಉಳಿದ 50 ಸಾವಿರ ರೂ. ಶುಲ್ಕವನ್ನು ಸಕಾಲದಲ್ಲಿ ಪಾತಿಸಲು ಸಾಧ್ಯವಾಗಲಿಲ್ಲ. ಕೊರೊನಾದ ಕಷ್ಟ ಕಾಲದಲ್ಲಿಯೂ ಕಾಲೇಜು ಆಡಳಿತ ಮಂಡಳಿ ಶುಲ್ಕ ಭರಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದೆ.


ಫೀಸು ತುಂಬುವಂತೆ ಯಾವುದೇ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾಧಿಕಾರಿ ಈಗಾಗಲೇ ಆದೇಶ ಕೂಡ ಹೊರಡಿಸಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم