ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುಬೋಧ ಪ್ರೌಢಶಾಲೆ ಪಾಣಾಜೆ. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಭರತೇಶ್ ರಾವ್ ಬಿ. ಆಯ್ಕೆ

ಸುಬೋಧ ಪ್ರೌಢಶಾಲೆ ಪಾಣಾಜೆ. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಭರತೇಶ್ ರಾವ್ ಬಿ. ಆಯ್ಕೆ


ಪಾಣಾಜೆ: ಸುಬೋಧ ಪ್ರೌಢಶಾಲೆ ಪಾಣಾಜೆಯ ಹೆತ್ತವರ, ಪೋಷಕರ ಸಭೆಯು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಜರುಗಿತು. 2021-2022 ನೇ ಸಾಲಿಗೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಭರತೇಶ್ ರಾವ್ ಬಿ.ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಕಾರ್ಯದರ್ಶಿಯಾಗಿ ಉದಯ ರೈ ಹಾಗೂ ಸದಸ್ಯರಾಗಿ ಗೀತಾ ಜಿ ಎ, ಚಂದ್ರಾವತಿ, ಧನಲಕ್ಷ್ಮಿ, ಗೀತಾ, ಹಸೈನಾರ್, ಸೂರ್ಯನಾರಾಯಣ, ಕೇಶವ, ನಳಿನಿ, ಅಶ್ರಫ್, ವಸಂತಿ, ಶ್ರೀಧರ ಬಲ್ಯಾಯ ಹಾಗೂ ಜಯಶ್ರೀ, ಆಯ್ಕೆಗೊಂಡರು.


ಇದೇ ಸಂದರ್ಭದಲ್ಲಿ ಅಕ್ಷರ ದಾಸೋಹ ಮೇಲ್ವಿಚಾರಣಾ ಸಮಿತಿ ಹಾಗೂ ಮಕ್ಕಳ ಹಿತರಕ್ಷಣಾ ಸಮಿತಿಯನ್ನು ರಚಿಸಲಾಯಿತು.ಶಾಲೆ ಪೂರ್ಣಪ್ರಮಾಣದಲ್ಲಿ ಕರ್ತವ್ಯ ನಿರ್ವಹಿಸುವರೇ ನಡೆಸಬೇಕಾದ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.


ಮಕ್ಕಳು ಶಾಲೆಯಲ್ಲಿ ಅನುಸರಿಸಬೇಕಾದ ನಿಯಮಗಳು ಹಾಗೂ ಶಿಸ್ತಿನ ಬಗ್ಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸುಧೀರ್ ಎಸ್. ಪಿ.ಅವರು ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಪತಿ ಭಟ್ಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ನಿರ್ಮಲಾ ವಂದಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم