ಮಂಗಳೂರು: 'ಅಮೃತ ಪ್ರಕಾಶ 'ಪತ್ರಿಕೆಯ 34ನೇ ಸರಣಿ ಕಾರ್ಯಕ್ರಮದ ಅಂಗವಾಗಿ ವಿಶ್ರಾಂತ ಶಿಕ್ಷಕಿ ಶ್ರೀಮತಿ ಪುಷ್ಪಾ ಜೋಗಿಯವರ 'ಪಂಚಪುರ್ಪ' ತುಳು ನಾಟಕ ಸಂಕಲನ ಬಿಡುಗಡೆ ಸಮಾರಂಭವು ಅಕ್ಟೋಬರ್ 26, 2021 ರಂದು ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು.
ನಿಟ್ಟೆ ಶಂಕರ ಅಡ್ಯಂತಾಯ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಶೆಟ್ಟಿ ಕೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಾಧ್ಯಾಪಕರು ಹಾಗೂ ಹಿರಿಯ ಯಕ್ಷಗಾನ ರಂಗ ನಿರ್ದೇಶಕರಾಗಿರುವ ಡಾ.ದಿನಕರ ಎಸ್ ಪಚ್ಚನಾಡಿಯವರು ಕೃತಿಯನ್ನು ಲೋಕಾರ್ಪಣೆ ಮಾಡಿದರು.
ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ರವರು ಎಲ್ಲರನ್ನು ಸ್ವಾಗತಿಸಿದರು. ನಾಟಕಕಾರ್ತಿ ಪುಷ್ಪಾ ಜೋಗಿ ಯವರು ಉಪಸ್ಥಿತರಿದ್ದರು. ಶಿಕ್ಷಕಿ, ಕವಯತ್ರಿ ಶ್ರೀಮತಿ ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق