ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುನೀತ್ ರಾಜ್‍ಕುಮಾರ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಪುನೀತ್ ರಾಜ್‍ಕುಮಾರ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು



 ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದ ಅಭಿಮಾನಿಗಳಿಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆಯ ಬೆನ್ನಲ್ಲೇ ಇದೀಗ ಮತ್ತೋರ್ವ ಅಭಿಮಾನಿ ನೆಚ್ಚಿನ ನಟನ ಸಾವಿನ ಸುದ್ದಿಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ನಡೆದಿದೆ.

ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿಯಾಗಿದ್ದ 26 ವರ್ಷದ ರಾಹುಲ್ ಗಾಡಿವಡ್ಡರ ಪುನೀತ್ ಸಾವಿನ ಸುದ್ದಿಕೇಳಿ ಶಾಕ್ ಗೊಳಗಾಗಿದ್ದರು. ತೀವ್ರವಾಗಿ ಮನನೊಂದ ರಾಹುಲ್, ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

0 تعليقات

إرسال تعليق

Post a Comment (0)

أحدث أقدم