ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆ ಕಂಡುಬಂದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗಿದೆ. ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ದೊರಕಿದೆ.
Post a Comment