ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಜಿಲ್ಲಾ ಚೇರ್ಮನ್‌ ಸಿಎ ಶಾಂತಾರಾಮ ಶೆಟ್ಟಿ 2 ಲಕ್ಷ ರೂ ದೇಣಿಗೆ

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಜಿಲ್ಲಾ ಚೇರ್ಮನ್‌ ಸಿಎ ಶಾಂತಾರಾಮ ಶೆಟ್ಟಿ 2 ಲಕ್ಷ ರೂ ದೇಣಿಗೆ



ಮಂಗಳೂರು: ರೆಡ್‌ಕ್ರಾಸ್ ಶತಮಾನೋತ್ಸವದ ಅಂಗವಾಗಿ ಭಾರತೀಯ ರೆಡ್‌ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಶತಮಾನೋತ್ಸವ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದರ ಶಂಕುಸ್ಥಾಪನೆ ದಿನದಂದು ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅವರು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ.ಗಳ ಚೆಕ್ ಅನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರಿಗೆ ಹಸ್ತಾಂತರಿಸಿದರು.


ಈ ಸಂದರ್ಭ ರೆಡ್‌ಕ್ರಾಸ್ ರಾಜ್ಯ ಚೇರ್ಮನ್ ಎಸ್. ನಾಗಣ್ಣ, ರೆಡ್‌ಕ್ರಾಸ್ ಜಿಲ್ಲಾ ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ, ಗೌರವ ಕಾರ್ಯದರ್ಶಿ ಎಸ್. ಎ. ಪ್ರಭಾಕರ ಶರ್ಮಾ, ಸಾರ್ವಜನಿಕ ಸಂಪರ್ಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ಬಿ. ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು. 6 ಕೋಟಿ ರೂ.ಗಳಲ್ಲಿ ಈ ನೂತನ ಕಟ್ಟಡ ನಿರ್ಮಾಣವಾಗಲಿದೆ.

ಫೋಟೋ: ಶಾಂತರಾಮ ಶೆಟ್ಟಿ


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم