ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶ ನಿರ್ಬಂಧ

 


ಮೈಸೂರು: ನಾಳೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆ  ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ನಾಳೆ ಬೆಳಿಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೇರಿ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.

ಈ ಕಾರಣ ನಾಳೆ ಭಕ್ತರು, ಪ್ರವಾಸಿಗರಿಗೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ತಾವರೆಕಟ್ಟೆ ಗೇಟ್ ಬಳಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಚಾಮುಂಡಿಬೆಟ್ಟದ ನಿವಾಸಿಗಳು, ಉದ್ಘಾಟನಾ ಕಾರ್ಯಕ್ರಮದ ತಯಾರಿ ಕೆಲಸದ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ.

ಕೆ.ಆರ್ ಠಾಣಾ ಪೊಲೀಸರು ಸಾರ್ವಜನಿಕರ ವಾಹನ ತಪಾಸಣೆ ನಡೆಸುತ್ತಿದ್ದಾರೆ.

0 تعليقات

إرسال تعليق

Post a Comment (0)

أحدث أقدم