ಬೆಂಗಳೂರು: ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿ 2 ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಬಾರಿ ಅನಾಹುತ ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನೆ ನಡೆದ ಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರಿ ನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Post a Comment